ಬೆಂಗಳೂರು | ಮಾದಕ ಪದಾರ್ಥ ಸಂಗ್ರಹಿಸಿಟ್ಟಿದ್ದ 9 ವಿದೇಶಿಗರ ಬಂಧನ
Update: 2025-09-07 18:42 IST
ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು, ಸೆ.7: ಮಾದಕ ಪದಾರ್ಥಗಳನ್ನು ಸಂಗ್ರಹಿಸಿಟ್ಟಿದ್ದ 9 ಜನ ವಿದೇಶಿ ಪ್ರಜೆಗಳನ್ನು ಬೆಂಗಳೂರು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಗುಂಜೂರು, ವರ್ತೂರು, ಬೇಗೂರು, ಕೆ.ಆರ್.ಪುರಂ, ವೈಟ್ ಫೀಲ್ಡ್ ಸೇರಿದಂತೆ ವಿವಿಧೆಡೆ ದಾಳಿ ನಡೆಸಲಾಗಿದ್ದು, ಅಡ್ಮಾಕೊ ಬ್ರೈಟ್, ಎನ್ಕೇಟೈ ಕೋಫಿ, ಬೆನೆಡಿಕ್ಟ್, ಪ್ರಿಸ್ಕಿಲ್ ಎಂಬುವರು ಸೇರಿದಂತೆ 9 ಜನರನ್ನು ಬಂಧಿಸಲಾಗಿದೆ.
ಆರೋಪಿಗಳ ಬಳಿ 70 ಲಕ್ಷ ರೂ. ಮೌಲ್ಯದ 700 ಗ್ರಾಂ ಎಂಡಿಎಂಎ ಜಪ್ತಿ ಮಾಡಲಾಗಿದೆ. ಆರೋಪಿಗಳ ಪೈಕಿ ಕೆಲವರು ವೀಸಾ ಅವಧಿ ಮುಗಿದ ಬಳಿಕವೂ ವಾಸವಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದರು.