×
Ad

ಬೆಂಗಳೂರು: ತಪಾಸಣೆ ವೇಳೆ ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂದು ಆತಂಕ ಸೃಷ್ಟಿಸಿದ ವಿಮಾನ ಪ್ರಯಾಣಿಕನ ವಿರುದ್ಧ ಪ್ರಕರಣ ದಾಖಲು

Update: 2024-04-08 19:08 IST

ಬೆಂಗಳೂರು: ಇಲ್ಲಿನ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಲಗೇಜ್ ತಪಾಸಣೆ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಹೇಳಿ ಆತಂಕ ಸೃಷ್ಟಿಸಿದ ಘಟನೆ ಸಂಬಂಧ ಪ್ರಯಾಣಿಕನ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ.

ಮಾ.28ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಸಂಬಂಧ ಥಾಣೆಯ ಸೋನಿಪತ್ ಮೂಲದ ಪೈ(47) ಎಂಬಾತನ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 505(1)(ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂಜಿನಿಯರ್ ಆಗಿರುವ ಪೈ, ಮಾ.28ರಂದು ಬೆಂಗಳೂರಿನಿಂದ ಪುಣೆಗೆ ಏರ್ ಇಂಡಿಯನ್ ಎಕ್ಸ್ ಪ್ರೆಸ್ ವಿಮಾನವನ್ನು ಹತ್ತಬೇಕಿತ್ತು. ಈ-9 ಪೋಸ್ಟ್ 10ರ ಚೆಕ್ ಕೌಂಟರ್ ಬಳಿ ತೆರಳವ ಮೊದಲು ಲಗೇಜ್ ಸ್ಕ್ಯಾನಿಂಗ್ ನಡೆಸುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ತನ್ನ ಬ್ಯಾಗ್‍ನಲ್ಲಿ ಬಾಂಬ್ ಇರುವುದಾಗಿ ಕಿರುಚಿದ್ದಾನೆ.

ಈ ವೇಳೆ ಕರ್ತವ್ಯದಲ್ಲಿದ್ದ ಸಮೃದ್ಧಿ ಎಂಬುವವರು ಕೂಡಲೇ ಭದ್ರತಾ ಪಡೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಅಧಿಕಾರಿಗಳು ಬ್ಯಾಗ್‍ಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾವುದೇ ಬಾಂಬ್ ಇಲ್ಲ ಎಂಬುದು ತಿಳಿದುಬಂದಿದೆ.

ಘಟನೆ ಬಳಿಕ ವಿಮಾನ ನಿಲ್ದಾಣದ ಸಿಬ್ಬಂದಿ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವ್ಯಕ್ತಿಯನ್ನು ಬಂಧನಕ್ಕೊಳಪಡಿಸಿದ್ದು, ಕಾನೂನು ಕ್ರಮ ಜರುಗಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News