×
Ad

ಬೆಂಗಳೂರು | ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಗೆ ಬಾಲಕಿ ಬಲಿ

Update: 2025-10-11 18:36 IST

ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.11: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಚಾಲಕನ ಅಜಾಗರೂಕತೆಯಿಂದಾಗಿ ಬಾಲಕಿ ಮೃತಪಟ್ಟಿರುವ ದಾರುಣ ಘಟನೆ ರಾಜಾಜಿನಗರ ಒಂದನೇ ಹಂತದಲ್ಲಿ ಶನಿವಾರ ನಡೆದಿದೆ.

ಭುವನಾ(9) ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಟ್ಯೂಷನ್ ಮುಗಿಸಿಕೊಂಡು ತನ್ನ ಸಹೋದರಿಯರು ಮತ್ತು ಸ್ನೇಹಿತೆಯರೊಂದಿಗೆ ಬರುತ್ತಿದ್ದ ಭುವನಾಗೆ ಬಿಎಂಟಿಸಿ ಬಸ್ ಢಿಕ್ಕಿಯಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಆಕೆ ಮೃತಪಟ್ಟಿದ್ದಾಳೆ ಎಂದು ಗೊತ್ತಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಬಿಎಂಟಿಸಿ ಬಸ್‍ನಿಂದ ಸರಣಿ ಅಪಘಾತ: ಮತ್ತೊಂದೆಡೆ ಬಿಎಂಟಿಸಿ ಬಸ್‍ನಿಂದ ಸರಣಿ ಅಪಘಾತ ಸಂಭವಿಸಿದ ಘಟನೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ 9ನೇ ಗೇಟ್ ಬಳಿ ಶನಿವಾರ ಸಂಭವಿಸಿದೆ. ಈ ವೇಳೆ, ಅಪಘಾತದಿಂದ ಓರ್ವ ಆಟೋ ಚಾಲಕ ಸಹ ಗಾಯಗೊಂಡಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬನಶಂಕರಿ ನಡುವಿನ ಮಾರ್ಗದ ಬಸ್ ಚಾಲಕ ಏಕಾಏಕಿ ಬಂದು 9 ವಾಹನಗಳಿಗೆ ಢಿಕ್ಕಿ ಹೊಡೆದಿದ್ದಾನೆ. ಬಸ್ ಚಾಲಕನಿಗೆ ದಿಢೀರನೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News