×
Ad

ಬೆಂಗಳೂರು | ಆಟವಾಡುವಾಗ ಮಕ್ಕಳಿಗೆ ಹೊಡೆಯುತ್ತಾನೆಂದು ಬಾಲಕನ ಹತ್ಯೆ; ಆರೋಪಿಯ ಬಂಧನ

Update: 2025-05-08 19:13 IST

ಸಾಂದರ್ಭಿಕ ಚಿತ್ರ | PC : freepik.com

ಬೆಂಗಳೂರು : ತಮ್ಮ ಮಕ್ಕಳಿಗೆ ಬಾಲಕನೊಬ್ಬ ಹೊಡೆಯುತ್ತಾನೆಂದು ಆತನ ಕುತ್ತಿಗೆ ಹಿಸುಕಿ ಹತ್ಯೆಗೈದ ಪ್ರಕರಣದಡಿ ಬಿಹಾರ ಮೂಲದ ಆರೋಪಿಯನ್ನು ಇಲ್ಲಿನ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಸಂದೇಶ್ವರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಪರಪ್ಪನ ಅಗ್ರಹಾರದ ರಾಯಸಂದ್ರದಲ್ಲಿ ಆರೋಪಿ ಹಾಗೂ ಮೃತ ಬಾಲಕನ ಕುಟುಂಬಸ್ಥರು ವಾಸಿಸುತ್ತಿದ್ದರು. ಆರೋಪಿ ಸಂದೇಶ್ವರ್‌ಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆಟವಾಡುವ ವಿಚಾರದಲ್ಲಿ ಮೃತ ಬಾಲಕನಿಗೆ ಮತ್ತು ಹೆಣ್ಣು ಮಕ್ಕಳಿಗೆ ಜಗಳವಾಗುತ್ತಿತ್ತು. ಹಾಗಾಗಿ ಆರೋಪಿ ಬಾಲಕನನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News