×
Ad

Bengaluru : ನಟಿ ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ಆತ್ಮಹತ್ಯೆ

Update: 2026-06-25 16:00 IST
ಸಾಂದರ್ಭಿಕ ಚಿತ್ರ


ಬೆಂಗಳೂರು : ಸ್ಯಾಂಡಲ್‌ವುಡ್ ನಟಿ ಹಾಗೂ ಬಿಗ್​ಬಾಸ್ ಮಾಜಿ ಸ್ಪರ್ಧಿ ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆರ್​ಆರ್​ ನಗರದಲ್ಲಿರುವ ಎಲಿಗೆಂಟ್ ಟೆರೇಸ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ವೈಶಾಖ್ ಎಂದು ಗುರುತಿಸಲಾಗಿದೆ. ನಟಿ, ಸ್ನೇಹಿತೆ ಮನೆಯಲ್ಲಿ ಕಳೆದ ರಾತ್ರಿ ಯಾರೂ ಇಲ್ಲದಾಗ ವೈಶಾಖ್ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆ ಸಂಬಂಧ ವೈಶಾಖ್ ತಂದೆ ನೀಡಿದ ದೂರಿನ ಮೇರೆಗೆ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News