×
Ad

ಬೆಂಗಳೂರು: ಸಿ.ಟಿ.ರವಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ

Update: 2024-12-20 14:54 IST

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ಮಾನಹಾನಿಕರ ಪದ ಬಳಸಿ ನಿಂದಿಸಿದ ಆರೋಪದಲ್ಲಿ ಮಾಜಿ ಸಚಿವ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿಯನ್ನು ಬಂಧಿಸಿರುವುದನ್ನು ಖಂಡಿಸಿ ಬಿಜೆಪಿ ವತಿಯಿಂದ ನಗರದಲ್ಲಿ 'ಫ್ರೀಡಂ ಪಾರ್ಕ್'ನಲ್ಲಿಂದು ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತಿತರ ಮುಖಂಡರು ಮಾತನಾಡಿ ಬಂಧನ ಕ್ರಮವನ್ನು ಆಕ್ಷೇಪಿಸಿದರು.

ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಸಚಿವ ಭೈರತಿ ಬಸವರಾಜ್, ಶಾಸಕ ರವಿಸುಬ್ರಹ್ಮಣ್ಯ, ವಿಧಾನಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಹರೀಶ್ ಪೂಂಜಾ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬಿಬಿಎಂಪಿ ಮಾಜಿ ಸದಸ್ಯ ಉಮೇಶ್ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.

 

 



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News