ಬೆಂಗಳೂರು: ನಗರದ ನಡು ರಸ್ತೆಯಲ್ಲಿ ಟೊಯೋಟಾ ಕಂಪನಿಯ ಟೈಸರ್ ಕಾರೊಂದು ಇದ್ದಕ್ಕಿದ್ದಂತೆ ಬೆಂಕಿಗಾಹುತಿಯಾದ ಘಟನೆ ಶನಿವಾರ ಮಧ್ಯಾಹ್ನ ನಡೆದಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ನಗರ ಪೊಲೀಸ್ ಆಯುಕ್ತರ ಕಚೇರಿ ಮುಂಭಾಗದಲ್ಲಿ ಕಾರು ಚಲಿಸುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತುಕೊಂಡ ಚಾಲಕ ಕಾರಿನಿಂದ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ನೋಡನೋಡುತ್ತಿದ್ದಂತೆಯೇ ಕಾರಿಗೆ ಬೆಂಕಿ ವ್ಯಾಪಿಸಿ, ವಾಹನ ಬಹುತೇಕ ಸುಟ್ಟು ಕರಕಲಾಗಿದೆ. ಸ್ಥಳೀಯ ಹೋಟೆಲ್ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಕಾರಿಗೆ ಹಾನಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor