ಬೆಂಗಳೂರು: ಆಟವಾಡುತ್ತಿದ್ದ ಮಗುವೊಂದು ಆಕಸ್ಮಿಕವಾಗಿ ಕೆಮಿಕಲ್ ಬಕೆಟ್ ಗೆ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಒಂದು ವರ್ಷ 9 ತಿಂಗಳು ಪ್ರಾಯದ ಸುಬ್ರಮಣಿ ಮೃತಪಟ್ಟ ಮಗು.

ನವೆಂಬರ್ 2ರಂದು ತನ್ನ ಎಂಟು ವರ್ಷದ ಅಕ್ಕನ ಜೊತೆ ಆಟವಾಡುತ್ತಾ ಶಿವಂ ಕಾಪರ್ ಮೇಕರ್ ಎಂಬ ಫ್ಯಾಕ್ಟರಿ ಒಳಗೆ ಹೋಗಿತ್ತು. ಈ ವೇಳೆ ಆಕಸ್ಮಿಕವಾಗಿ ಮಗು ಕೆಮಿಕಲ್ ತುಂಬಿಸಿಟ್ಟಿದ್ದ ಬಕೆಟ್ ಗೆ ಬಿದ್ದಿತ್ತು.

ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಕೂಡಲೇ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಹತ್ತು ದಿನಗಳಿಂದ ಜೀವನ್ಮರಣ ಹೋರಾಟ ನಡೆಸಿದ ಮಗು ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.

ಶ್ರೀರಾಮಪುರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor