ಬೆಂಗಳೂರು: ಮಿಲಾದುನ್ನೆಬಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಬಸವನಗುಡಿಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ವೇಳೆ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಪ್ರತಿಭಟನೆ ನಡೆಸಿದ ಪ್ರಸಂಗವೂ ನಡೆದಿದೆ.

ಬಸವನಗುಡಿಯ ಕೆ.ಆರ್.ರಸ್ತೆಯಲ್ಲಿರುವ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಕಚೇರಿಯ ಬಳಿ ಮೆರವಣಿಗೆ ಬಂದಾಗ ಎರಡು ಗುಂಪಿನ ಮಧ್ಯೆ ಮಾತಿಗೆ ಮಾತು ಬೆಳೆದು ಗಲಾಟೆ ಶುರುವಾಗಿದೆ ಎನ್ನಲಾಗಿದೆ. ಈ ವೇಳೆ ಮುರಳಿ ಎಂಬವರ ತೆಲೆಯಲ್ಲಿ ರಕ್ತ ಬರುವಂತೆ ಹಲ್ಲೆ ನಡೆದಿದೆ ಎನ್ನಲಾಗಿದೆ.

ಗಲಾಟೆ ಮತ್ತು ಹಲ್ಲೆ ಖಂಡಿಸಿ ರಸ್ತೆಯಲ್ಲಿ ಕುಳಿತು ಪುನೀತ್ ಕೆರೆಹಳ್ಳಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾನೆ. ಸ್ಥಳಕ್ಕೆ ಆಗಮಿಸಿದ ಬಸವನಗುಡಿ ಪೊಲೀಸರು ಗುಂಪು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ದಕ್ಷಿಣ ವಿಭಾಗದ ಡಿಸಿಪಿ ವಂಶಿಕೃಷ್ಣ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪುನೀತ್ ಮತ್ತು ಆತನ ಸಹಚರರು ಪ್ರಚೋದನಕಾರಿ ಘೋಷಣೆ ಕೂಗಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor