ಸಾಂದರ್ಭಿಕ ಚಿತ್ರ | Photo credit : AI

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಲ್ಲಿ ಅರ್ಹ ನಾಗರಿಕರಿಗೂ ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳ ಪ್ರಯೋಜನಗಳನ್ನು ತಲುಪಿಸುವ ಉದ್ದೇಶದಿಂದ ಅ.28ರಿಂದ ಡಿ.31ರವರೆಗೆ ಸಮಗ್ರ ಹಣಕಾಸು ಒಳಗೊಳ್ಳುವಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮಾರ್ಗದರ್ಶಿ ಜಿಲ್ಲಾ ಪ್ರಬಂಧಕ ವಿಠಲ ಗೌಡ ಬಿ. ತಿಳಿಸಿದ್ದಾರೆ.

ಶನಿವಾರ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಹಣಕಾಸು ಒಳಗೊಳ್ಳುವಿಕೆಯನ್ನು ಬಲಪಡಿಸುವುದು, ಅರ್ಹರಿಗೆ ಬ್ಯಾಂಕಿಂಗ್ ಸೌಲಭ್ಯಗಳು, ಸಾಮಾಜಿಕ ಭದ್ರತಾ ಯೋಜನೆಗಳು, ಸಾಲ ಸೌಲಭ್ಯಗಳನ್ನು ತಲುಪಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶÉ. ಬೆಂಗಳೂರು ನಗರ ಜಿಲ್ಲೆಯ ಲೀಡ್ ಬ್ಯಾಂಕ್ ಕಚೇರಿಯ ಸಮನ್ವಯದಲ್ಲಿ ಗ್ರಾ.ಪಂ., ಬ್ಯಾಂಕುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಸಹಯೋಗದೊಂದಿಗೆ ಸರಕಾರಿ ಹಣಕಾಸು ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಲು ಒತ್ತು ನೀಡಲಾಗುತ್ತಿದೆ ಎಂದರು.

ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ, ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು, ಮರು-ಕೆವೈಸಿ ನವೀಕರಣ, ಸೆಂಟ್ರಲ್ ಕೆವೈಸಿ ಗುರುತಿನ ಸಂಖ್ಯೆ ಪಡೆಯಲು ನೆರವು, ಅರ್ಹರಿಗೆ ಬ್ಯಾಂಕ್ ಖಾತೆ ತೆರೆಯುವುದು, ಹಣಕಾಸು ಸಾಕ್ಷರತಾ ಕಾರ್ಯಕ್ರಮಗಳನ್ನು ನಡೆಸುವುದು, ಬ್ಯಾಂಕಿಂಗ್ ಸೇವೆಗಳ ಕುರಿತು ಮಾಹಿತಿ ನೀಡುವುದು ಹಾಗೂ ಗ್ರಾಹಕರ ಕುಂದು-ಕೊರತೆಗಳನ್ನು ಪರಿಹರಿಸುವುದು ಅಭಿಯಾನದ ಇತರ ಪ್ರಮುಖ ಕಾರ್ಯಗಳಾಗಿವೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor