×
Ad

ಬೆಂಗಳೂರು:‌ ಸಿಎಂ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿ: ಎಫ್‍ಐಆರ್ ದಾಖಲು

Update: 2023-12-11 20:42 IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿದ ಪ್ರಕರಣ ಸಂಬಂಧ ಇಲ್ಲಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿರುವುದು ವರದಿಯಾಗಿದೆ.

ಮುಖ್ಯಮಂತ್ರಿ ಅವರ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.

ನಕಲಿ ಲೆಟರ್ ಹೆಡ್ ಸೃಷ್ಟಿಸಿ ಮುಖ್ಯಮಂತ್ರಿ ಕಚೇರಿಯಿಂದ ಲೋಕೋಪಯೋಗಿ ಸಚಿವರಿಗೆ ಕಡತವೊಂದನ್ನು ಕಳುಹಿಸಲಾಗಿದೆ. ಈ ಕಡತದಲ್ಲಿ ರಾಜೇಂದ್ರ ಎಂಬ ಹೆಸರಿನಲ್ಲಿ ಸಹಿ ಹಾಕಲಾಗಿದ್ದು, ಅಂಕಿತ್ ಎಂಬಾತನಿಗೆ ಇಲಾಖೆಯಲ್ಲಿ ತಾತ್ಕಾಲಿಕ ಕೆಲಸ ನೀಡುವಂತೆ ಉಲ್ಲೇಖಿಸಲಾಗಿದೆ.

ಆದರೆ, ಮುಖ್ಯಮಂತ್ರಿಗಳ ಕಚೇರಿಯಲ್ಲಿ ರಾಜೇಂದ್ರ ಎಂಬ ವ್ಯಕ್ತಿಯೇ ಇಲ್ಲ. ಈ ಹಿನ್ನೆಲೆ ರಾಜೇಂದ್ರ ಹಾಗೂ ಅಂಕಿತ್ ಎಂಬುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಡಾ.ವೆಂಕಟೇಶಯ್ಯ ಅವರ ದೂರಿನಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News