×
Ad

ಬೆಂಗಳೂರು | ಮಾದಕವಸ್ತು ಮಾರಾಟ ಪ್ರಕರಣ : ಆರೋಪಿ ಸೆರೆ, 4 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

Update: 2025-05-17 20:22 IST

ಸಾಂದರ್ಭಿಕ ಚಿತ್ರ | PC : freepik.com

ಬೆಂಗಳೂರು : ಮಾದಕವಸ್ತು ಮಾರಾಟ ಮಾಡುತ್ತಿದ್ದ ಪ್ರಕರಣದಡಿ ಆಫ್ರಿಕಾ ದೇಶದ ಪ್ರಜೆಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಸುಮಾರು 4 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಸಿಸಿಬಿ ಪೊಲೀಸರು, ಆರೋಪಿಯ ಮನೆ ಮೇಲೆ ದಾಳಿ ನಡೆಸಿ ವಿದೇಶಿ ಪ್ರಜೆಯನ್ನು ಬಂಧಿಸಿದ್ದು, ಆತನಿಂದ 2 ಕೆ.ಜಿ. 585 ಗ್ರಾಂ. ಎಂಡಿಎಂಎ ಕ್ರಿಸ್ಟಲ್, ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್ ವಶಪಡಿಸಿಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.

ಆರೋಪಿ ವ್ಯಾಪಾರ ವೀಸಾದಲ್ಲಿ ಭಾರತಕ್ಕೆ ಆಗಮಿಸಿದ್ದು, ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಚ್ಯುತನಗರದ ಮನೆಯೊಂದನ್ನು ಬಾಡಿಗೆಗೆ ತೆಗೆದುಕೊಂಡು ಕಾಲೇಜು ವಿದ್ಯಾರ್ಥಿಗಳು ಮತ್ತು ಐಟಿ, ಬಿಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News