ಬೆಂಗಳೂರು | ಡ್ರಗ್ಸ್, ಗಾಂಜಾ ಮಾರಾಟ ಪ್ರಕರಣ : ಆರೋಪಿ ಸೆರೆ, 3 ಕೋಟಿ ಮೌಲ್ಯದ ಮಾಲು ವಶ
Update: 2025-05-28 23:33 IST
ಸಾಂದರ್ಭಿಕ ಚಿತ್ರ
ಬೆಂಗಳೂರು : ಡ್ರಗ್ಸ್ ಮತ್ತು ಗಾಂಜಾ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಬಂಧಿಸಿರುವ ಅಮೃತಹಳ್ಳಿ ಠಾಣೆ ಪೊಲೀಸರು, ಆತನಿಂದ 3 ಕೋಟಿ ಮೌಲ್ಯದ ಮಾಲನ್ನು ಜಪ್ತಿ ಮಾಡಿರುವುದಾಗಿ ತಿಳಿಸಿದ್ದಾರೆ.
ಬಂಧಿತನನ್ನು ನೈಜೀರಿಯಾ ಮೂಲದ ಪೆಪೆ ಎಂದು ಗುರುತಿಸಲಾಗಿದೆ. ಆರೋಪಿ ಬಳಿ ಇದ್ದ 3 ಕೋಟಿ ರೂ. ಮೌಲ್ಯದ 3 ಕೆ.ಜಿ. ಡ್ರಗ್ಸ್ ಮತ್ತು ಗಾಂಜಾವನ್ನು ಜಪ್ತಿ ಮಾಡಲಾಗಿದೆ.
ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.