ಬೆಂಗಳೂರು: ನಗರದ ಪುಲಕೇಶಿನಗರದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ನಿರ್ಮಾಣ ಹಂತದ ಕಟ್ಟಡದಲ್ಲಿ ತೀವ್ರ ಸ್ವರೂಪದ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ನಿವಾಸಿಗಳು ಆತಂಕಗೊಂಡಿದ್ದರು. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆರಂಭದಲ್ಲಿ ಇದು ಬ್ಯಾಟರಿಗಳಿಂದ ಸ್ಫೋಟ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಗಾಯಾಳುಗಳನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳದ ವಸ್ತುಗಳು ಎಫ್‌ಎಸ್‌ಎಲ್‌ಗೆ : ಗೃಹ ಸಚಿವ

ಘಟನೆ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಘಟನಾ ಸ್ಥಳದಲ್ಲಿದ್ದ ಎಲ್ಲ ವಸ್ತುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ರವಾನಿಸಲಾಗಿದೆ. ಎಫ್‌ಎಸ್‌ಎಲ್ ವರದಿ ಬಂದ ಬಳಿಕ ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದು ತಿಳಿಯಲಿದೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor