Bengaluru | ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ತಂದೆಯೂ ಆತ್ಮಹತ್ಯೆಗೆ ಯತ್ನ
ಸಾಂದರ್ಭಿಕ ಚಿತ್ರ (AI)
ಬೆಂಗಳೂರು : ವ್ಯಕ್ತಿಯೊಬ್ಬ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ನೇಣುಹಾಕಿ ಕೊಂದು, ತನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಹೊರವಲಯದಲ್ಲಿರುವ ಐಷರಾಮಿ ಹೋಟೆಲ್ ನಡೆದಿದೆ.
ಇಮ್ರಾನ್ ಇಬ್ಬರು ಮಕ್ಕಳನ್ನು ಕೊಂದ ಆರೋಪಿ. ತನ್ನ ಇಬ್ಬರು ಹೆಣ್ಣು ಮಕ್ಕಳಾದ ಶೇಕ್ ಜೆಹೆರಾ (5 ), ಶೇಕ್ ಜೋಯಾ (10 )ರನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಆರೋಪಿ ಇಮ್ರಾನ್ ಮೂಲತಃ ಬೆಂಗಳೂರಿನ ನಾಗವಾರದ ನಿವಾಸಿಯಾಗಿದ್ದು, ಕ್ಯಾಬ್ ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿದ್ದನು ಎಂದು ಗೊತ್ತಾಗಿದೆ.
ಇಮ್ರಾನ್ ತನ್ನ ಮಕ್ಕಳನ್ನು ಹತ್ಯೆ ಮಾಡಲು ಏರ್‌ಪೋರ್ಟ್ ತಾಜ್ ಹೋಟೆಲ್‌ನ 4ನೇ ಮಹಡಿಯಲ್ಲಿ ಕೊಠಡಿಯನ್ನು ಮುಂಚಿತವಾಗಿಯೇ ಬುಕ್ ಮಾಡಿದ್ದ ಎನ್ನಲಾಗಿದೆ. ಕೃತ್ಯದ ಬಳಿಕ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದು, ಅದರಲ್ಲಿ ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಇಮ್ರಾನ್‌ನನ್ನು ಸದ್ಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.