×
Ad

Bengaluru | ತಂದೆ-ತಾಯಿ ಮತ್ತು ಮಗಳ ಬರ್ಬರ ಹತ್ಯೆ

ಪ್ರಿಯಕರನ ಜೊತೆಗೂಡಿ ಪುತ್ರಿಯಿಂದಲೇ ಕೃತ್ಯ ಶಂಕೆ

Update: 2026-06-23 10:42 IST

ಸಾಂದರ್ಭಿಕ ಚಿತ್ರ | PC : PTI

ಬೆಂಗಳೂರು: ತಂದೆ-ತಾಯಿ ಮತ್ತು ಮಗಳನ್ನು ಬರ್ಬರವಾಗಿ ಕೊಲೆ ಮಾಡಿರುವ ಬೆಚ್ಚಿ ಬೀಳಿಸುವ ಘಟನೆ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೆಹಳ್ಳಿ ಎಂಬಲ್ಲಿ ರವಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಸೋಮಸುಂದರ(55), ಮುತ್ತುಲಕ್ಷ್ಮೀ (48) ಮತ್ತು ಅವರ ಪುತ್ರಿ ಸುಪ್ರಿಯಾ(20) ಕೊಲೆಯಾದವರು. ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಲಾಗಿದೆ. ಇವರ ಇನ್ನೋರ್ವ ಪುತ್ರಿ ಶ್ವೇತಾ ಮತ್ತು ಆಕೆಯ ಪ್ರಿಯಕರ ಕೆನತ್ ಎಂಬಾತನ ಜೊತೆ ಸೇರಿ ಈ ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದೆ.

ಕೆನತ್ ಜೊತೆ ಶ್ವೇತಾ ಲಿವ್-ಇನ್ ರಿಲೇಷನ್ ಶಿಪ್ ನಲ್ಲಿದ್ದು, ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಇದೇ ಕಾರಣಕ್ಕೆ ಹೆತ್ತವರನ್ನು ಹಾಗೂ ತಂಗಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News