Bengaluru : ಬಿಜೆಪಿ ಶಾಸಕ ಮುನಿರತ್ನ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್ ದಾಖಲು
ಬೆಂಗಳೂರು: ಮಹಿಳೆಯೊಬ್ಬರ ವಿರುದ್ಧ ಸಂಚು ರೂಪಿಸಿ ಸುಳ್ಳು ಎಫ್‌ಐಆರ್ ದಾಖಲಿಸಿ, ಆಕೆಯನ್ನು ಬಂಧಿಸುವಂತೆ ಮಾಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್‌ಆರ್ ನಗರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಸೇರಿದಂತೆ ಎಂಟು ಮಂದಿಯ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಮುನಿರತ್ನ, ಕಿರಣ್ ನಾಯ್ಡು, ಲೋಹಿತ್ ಗೌಡ, ಮಂಜುನಾಥ್, ಲಕ್ಷ್ಮೀ ಜಯರಾಮ್, ಪೊಲೀಸ್ ಇನ್ಸ್‌ಪೆಕ್ಟರ್ ಐಯಣ್ಣ ರೆಡ್ಡಿ, ಪೊಲೀಸ್ ಇನ್ಸ್‌ಪೆಕ್ಟರ್ ಲೋಹಿತ್ ಬಿ.ಎನ್. ಹಾಗೂ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಐಪಿಸಿ ಸೆಕ್ಷನ್‌ಗಳಾದ 395, 363, 345(C), 354(A), 342, 323, 120(B), 504, 506 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ 66(E), 67 ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಮಹಿಳೆಯ ವಿರುದ್ಧ ಸಂಚು ರೂಪಿಸಿ ಸುಳ್ಳು ಪ್ರಕರಣ ದಾಖಲಿಸುವುದು, ಆಕೆಯನ್ನು ಬಂಧಿಸುವಂತೆ ಮಾಡುವುದು ಸೇರಿದಂತೆ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವರ್ಗಾಯಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಎಫ್‌ಐಆರ್ ದಾಖಲಿಸಿರುವ ರಾಜರಾಜೇಶ್ವರಿನಗರ ಪೊಲೀಸರು ಪ್ರಕರಣವನ್ನು ಎಸ್‌ಐಟಿಗೆ ಹಸ್ತಾಂತರಿಸಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.