×
Ad

Bengaluru | ಖಾಸಗಿ ಶಾಲೆಯಲ್ಲಿ ಬೆಂಕಿ ಅವಘಡ

Update: 2026-05-30 15:59 IST

ಸಾಂದರ್ಭಿಕ ಚಿತ್ರ | Image by ilovehz on Magnific

ಬೆಂಗಳೂರು: ನಗರದ ಖಾಸಗಿ ಶಾಲೆಯಲ್ಲಿ ಶನಿವಾರ ಬೆಳಗ್ಗೆ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಕಟ್ಟಡ ಹೊತ್ತಿ ಉರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗ್ಗೆ 9:30ರ ಸುಮಾರಿಗೆ ನಾಗದೇವನಹಳ್ಳಿಯಲ್ಲಿರುವ ಖಾಸಗಿ ಶಾಲೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ., ಶಾಲೆಗೆ ರಜೆಯಿದ್ದ ಕಾರಣ ಸಂಭಾವ್ಯ ಭಾರೀ ಅನಾಹುತ ತಪ್ಪಿದೆ.

ಘಟನೆಯಲ್ಲಿ ಯಾವುದೇ ಗಾಯಗಳು ಅಥವಾ ಸಾವುನೋವುಗಳು ವರದಿಯಾಗಿಲ್ಲ. ಬೆಂಕಿಯನ್ನು ನಂದಿಸಲು ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಲೆಯ ನಾಲ್ಕನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಟ್ಟವಾದ ಹೊಗೆ ಇಡೀ ಕಟ್ಟಡವನ್ನು ಆವರಿಸಿತು.

ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News