×
Ad

ಬೆಂಗಳೂರು : ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಫೆ.7ಕ್ಕೆ ಸರಕಾರಿ ನೌಕರರ ಧರಣಿ

Update: 2024-02-05 22:54 IST

ಬೆಂಗಳೂರು: ಸರಕಾರಿ ನೌಕರರಿಗೆ ಶೇ.40ರಷ್ಟು ವೇತನ ಹೆಚ್ಚಳ, 7ನೇ ವೇತನ ಆಯೋಗವನ್ನು ಜಾರಿ, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ಸಮಾನ ವೇತನ, 18 ತಿಂಗಳ ತುಟ್ಟಿ ಭತ್ಯೆ ಬಿಡುಗಡೆ, ಹೊರಗುತ್ತಿಗೆ ಪದ್ಧತಿ ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರಕಾರಿ ನೌಕರರ ಒಕ್ಕೂಟದ ನೇತೃತ್ವದಲ್ಲಿ ಫೆ.7ಕ್ಕೆ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಭಡ್ತಿ ಮೀಸಲಾತಿ ಕಾಯ್ದೆ ಅನುಷ್ಠಾನಗೊಳಿಸಿ, ಬ್ಯಾಕ್ಲಾಕ್ ಹುದ್ದೆಗಳನ್ನು ಭರ್ತಿ, ಮಹಿಳಾ ನೌಕರರ ಮೇಲಿನ ದೌರ್ಜನ್ಯ ತಡೆಗಟ್ಟುವುದು, ಅನುದಾನಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ-ಬೋಧಕೇತರರಿಗೆ ನಿಶ್ಚಿತ ಪಿಂಚಣಿ ಸೌಲಭ್ಯ ಮರುಸ್ಥಾಪನೆ, ರಾಜ್ಯ ನಾಗರಿಕ ಸೇವಾ ನಿಯಮ 2021ರಲ್ಲಿನ ನೌಕರ ವಿರೋಧಿ ನೀತಿಯನ್ನು ಕೈಬಿಡಬೇಕು. ಈ ಎಲ್ಲ ಬೇಡಿಕೆಗಳನ್ನು ಸರಕಾರದ ಗಮನಕ್ಕೆ ತರಲು ಫೆ.16ಕ್ಕೆ ನೌಕರರ ಒಕ್ಕೂಟವು ರಾಷ್ಟ್ರೀಯ ಮುಷ್ಕರಕ್ಕೆ ಕರೆಕೊಟ್ಟಿದೆ ಎಂದು ಒಕ್ಕೂಟದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News