ಬೆಂಗಳೂರು | ಗ್ಯಾಸ್ ಸೋರಿಕೆಯಿಂದ ಹೊತ್ತಿ ಉರಿದ ಮನೆ; ಇಬ್ಬರು ಸಜೀವ ದಹನ
Update: 2025-05-01 12:50 IST
ಸಾಂದರ್ಭಿಕ ಚಿತ್ರ
ಬೆಂಗಳೂರು : ಗ್ಯಾಸ್ ಸೋರಿಕೆಯಿಂದ ಮನೆ ಹೊತ್ತಿ ಉರಿದಿದ್ದು, ಇಬ್ಬರು ಸಜೀವದಹನವಾಗಿರುವಂತಹ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯ ನಾಗರಾಜ್(50) ಮತ್ತು ಶ್ರೀನಿವಾಸ್(50) ಮೃತರು. ಅಭಿಷೇಕ್, ಶಿವಶಂಕರ್, ಲಕ್ಷ್ಮೀದೇವಿ ಮತ್ತು ಬಸವ ಎಂಬುವವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಗಂಗಯ್ಯ ಎಂಬುವವರಿಗೆ ಎರಡು ಬಾಡಿಗೆ ಮನೆಗಳು ಸೇರಿದ್ದು, ಬಳ್ಳಾರಿಯ ನಾಗರಾಜ್ ಕುಟುಂಬ ಒಂದು ಮನೆಯಲ್ಲಿ ಬಾಡಿಗೆಗೆ ಇತ್ತು. ಬೆಳಗ್ಗೆ ಕೆಲಸಕ್ಕೆ ತೆರಳುವಾಗ ನಾಗರಾಜ್ ದೇವರ ಮುಂದೆ ದೀಪ ಹಚ್ಚಿದ್ದರು. ಈ ವೇಳೆ ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ಮಗ ಅಭಿಷೇಕ್ ಮುಂದಾಗಿದ್ದ. ಅಜಾಗರೂಕತೆಯಿಂದ ಆ ವೇಳೆ ಗ್ಯಾಸ್ ಸೋರಿಕೆ ಆಗಿ ದೀಪದ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆಗೆ ನಾಗರಾಜ್ ಹಾಗೂ ಶ್ರೀನಿವಾಸ್ ಮೃತಪಟ್ಟಿದ್ದಾರೆ.