ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 28 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ 1.75 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಬ್ಯಾಂಕಾಕ್ ಮತ್ತು ವಿಯೇಟ್ನಾಂನಿಂದ ಬಂದ ಪ್ರಯಾಣಿಕರಿಂದ 80.11 ಕೆಜಿ ಹೈಡ್ರೋಪೋನಿಕ್ ಗಾಂಜಾ ಜಪ್ತಿ ಮಾಡಲಾಗಿದೆ. ಈ ಸಂಬಂಧ ಒಟ್ಟು ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ವಶಪಡಿಸಿಕೊಂಡ ಮಾದಕ ವಸ್ತುವಿನ ಮಾರುಕಟ್ಟೆ ಮೌಲ್ಯ ಸುಮಾರು 28 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಇದೇ ವೇಳೆ ಅಬುಧಾಬಿ ಹಾಗೂ ಕೌಲಾಲಂಪುರದಿಂದ ಆಗಮಿಸಿದ್ದ ಪ್ರಯಾಣಿಕರಿಂದ 1.2 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಿದ ಚಿನ್ನದ ಮೌಲ್ಯ ಸುಮಾರು 1.75 ಕೋಟಿ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಎರಡೂ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಒಟ್ಟು ಆರು ಪ್ರಯಾಣಿಕರನ್ನು ಬಂಧಿಸಲಾಗಿದ್ದು, ಕಸ್ಟಮ್ಸ್ ಅಧಿಕಾರಿಗಳು ಮುಂದಿನ ತನಿಖೆ ಮುಂದುವರೆಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor