ಸಾಂದರ್ಭಿಕ ಚಿತ್ರ

ಬೆಂಗಳೂರು : ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ತಮ್ಮ ಮತಕ್ಷೇತ್ರವಾದ ಚಾಮರಾಜನಗರಪೇಟೆಯಲ್ಲಿ ಸಾಕಷ್ಟು ಕ್ರಿಮಿನಲ್ ಚುಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪ ಮಾಡಿದ ಬೆನ್ನಲ್ಲೇ ಇದೀಗ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ, ಜೆಡಿಎಸ್ ಮುಖಂಡನ ಸಹೋದರನನ್ನು ವಶಕ್ಕೆ ಪಡೆದಿದ್ದಾರೆ.

ಚಾಮರಾಜನಗರಪೇಟೆಯ ಪಾದರಾಯನಪುರ ವಾರ್ಡ್‍ನ ಜೆಡಿಎಸ್ ಮಾಜಿ ಕಾರ್ಪೊರೇಟರ್ ಇಮ್ರಾನ್ ಪಾಷಾನ ಸಹೋದರನಾದ ಮೊಹ್ಸಿನ್ ಪಾಷಾ ಗಲಾಟೆ, ಹಲ್ಲೆ, ದೊಂಬಿ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪಗಳು ಕೇಳಿ ಬಂದಿವೆ. ಅಲ್ಲದೆ, ವಾರಂಟ್ ಇದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ವಿಶೇಷ ಕಾರ್ಯಚರಣೆಯನ್ನು ನಡೆಸಿದ ಸಿಸಿಬಿ ಪೊಲೀಸರು ಆರೋಪಿ ಮೊಹ್ಸಿನ್ ಪಾಷಾನನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗಾಗಿ ಜೆಜೆ ನಗರ ಠಾಣಾ ಪೊಲೀಸರಿಗೆ ಒಪ್ಪಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor