ಅಮಿತ್ ಕುಮಾರ್ ದುಬೆ

ಬೆಂಗಳೂರು:  ವೈಟ್ ಫೀಲ್ಡ್ ವಕೀಲರ ಶೂಟೌಟ್ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಇಂದು(ನ.12) ವೈಟ್ ಫೀಲ್ಡ್ ಠಾಣೆಯ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ.

ಅಮಿತ್ ಕುಮಾರ್ ದುಬೆ( 25) ಬಂಧಿತ ಆರೋಪಿ.

ಅಕ್ಟೋಬರ್ 19 ರಂದು ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ಟಂದೂರು ಆಗ್ರಹಾರದಲ್ಲಿ ವಕೀಲ ಮಂಜುನಾಥ್ ಎಂಬುವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮಂಜುನಾಥ್ ನಿರ್ಮಿಸಿದ್ದ ಶೆಡ್ ನಲ್ಲಿ ಬಾಡಿಗೆಗೆ ಇದ್ದ ಇಬ್ಬರು ಆರೋಪಿಗಳು‌ ಬಾಡಿಗೆ ಕೊಡುವ ವಿಚಾರದಲ್ಲಿ ಗಲಾಟೆ ಮಾಡಿಕೊಂಡು ಈ ಕೃತ್ಯ ಎಸಗಿದ್ದರು.

ಆರೋಪಿಗಳ ಬಂಧನಕ್ಕೆ ಹಲವು ವಿಶೇಷ ತಂಡಗಳ ರಚನೆ ಮಾಡಿದ್ದ ಬೆಂಗಳೂರು ಪೊಲೀಸರು ಆರೋಪಿಗಳಿಗಾಗಿ  ಹುಡುಕಾಟ ನಡೆಸಿದ್ದರು. ಇಂದು ಬಿಹಾರದಲ್ಲಿ ಒಬ್ಬ ಆರೋಪಿ ಅಮಿತ್ ಕುಮಾರ್ ದುಬೆಯನ್ನು ಬಂಧನ ಮಾಡಿದ್ದಾರೆ.

ಸದ್ಯ ಈ ಪ್ರಕರಣದ ಮತ್ತೊಬ್ಬ ಆರೋಪಿ ಪವನ್ ದುಬೆ ಇನ್ನೂ ತಲೆಮರೆಸಿಕೊಂಡಿದ್ದು, ಆತನ ಹುಡುಕಾಟವನ್ನು ಪೊಲೀಸರು ಮುಂದುವರೆಸಿದ್ದಾರೆ..

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor