ಬೆಂಗಳೂರು: 'ವಿಧಾನಸೌಧವನ್ನು ಬಾಂಬ್ ಇಟ್ಟು ಉಡಾಯಿಸಿದೆ' ಎಂದು AI ತಂತ್ರಜ್ಞಾನ ಬಳಸಿ ವಿಡಿಯೋ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಹಝರತ್ ಅಲಿ ಬಂಧಿತ ಆರೋಪಿ.

AI ತಂತ್ರಜ್ಞಾನ ಬಳಸಿ ವಿಧಾನಸೌಧವನ್ನ ಬಾಂಬ್ ಮೂಲಕ ಸ್ಫೋಟಿಸುವಂತೆ ವಿಡೀಯೋ ಮಾಡಿ Jnx king Hg ಎಂಬ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದ ಆರೋಪಿ, 'ವಿಧಾನಸೌಧ ಉಡಾ ದಿಯಾ' ಎಂಬ ಶೀರ್ಷಿಕೆ ನೀಡಿದ್ದ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆ ಎದುರಾಗಿತ್ತು. ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯ ವಿಡೀಯೋ ಇದೆ ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಬೆಂಗಳೂರಿನ ಪೈಪ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಹಝರತ್ ಅಲಿಯನ್ನು ಬಂಧಿಸಿದ್ದಾರೆ. ಆತನನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor