ಬೆಂಗಳೂರು: ರಾಜಧಾನಿಯ ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಗೊಂಡನಹಳ್ಳಿಯ ವಾಣಿಜ್ಯ ಮಳಿಗೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 23 ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮಳಿಗೆಯಲ್ಲಿ ಸಿಲಿಂಡರ್‌ಗಳ ಜತೆಗೆ ಪೆಟ್ರೋಲ್ ಮತ್ತು ಡೀಸೆಲ್‌ ಅನ್ನೂ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಇದರಿಂದಾಗಿ ಬೆಂಕಿ ಕಾಣಿಸಿಕೊಂಡ ಕೂಡಲೇ ಭಾರೀ ಪ್ರಮಾಣದಲ್ಲಿ ಬೆಂಕಿ ಹಾಗೂ ಹೊಗೆ ಆವರಿಸಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳೀಯರು ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಒಂದೇ ಮಳಿಗೆಯಲ್ಲಿ ಸಿಲಿಂಡರ್‌ಗಳ ಜತೆಗೆ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ಮಾಡುತ್ತಿದ್ದುದಕ್ಕೆ ಅನುಮತಿ ನೀಡಲಾಗಿತ್ತೇ ಎಂಬ ಬಗ್ಗೆ ಗಂಗಮ್ಮನಗುಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor