×
Ad

ಬೆಂಗಳೂರು| ಉಪರಾಷ್ಟ್ರಪತಿಯನ್ನು ಸ್ವಾಗತಿಸಿದ ಸಚಿವ ಯು.ಟಿ.ಖಾದರ್

Update: 2026-06-27 21:15 IST

ಬೆಂಗಳೂರು, ಜೂ.27: ಎರಡು ದಿನಗಳ ಅಧಿಕೃತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶನಿವಾರ ಬೆಂಗಳೂರಿಗೆ ಆಗಮಿಸಿದ ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಸ್ವಾಗತಿಸಿದರು.

ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರವಾಗಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಪ ರಾಷ್ಟ್ರಪತಿಯನ್ನು ಗೌರವಪೂರ್ವಕವಾಗಿ ಬರಮಾಡಿಕೊಂಡರು.

ಈ ಸಂದರ್ಭ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಸಲೀಂ ಅಹ್ಮದ್ ಸಹಿತ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News