×
Ad

Bengaluru | ಸುತ್ತಿಗೆಯಿಂದ ಹೊಡೆದು ಗಾರೆ ಕೆಲಸಗಾರನ ಭೀಕರ ಕೊಲೆ

Update: 2025-12-30 20:45 IST

ಸಾಂದರ್ಭಿಕ ಚಿತ್ರ | PC : gemini AI

ಬೆಂಗಳೂರು : ಸೋಮವಾರ ರಾತ್ರಿ ಇಲ್ಲಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲಕ ಕಾರಣಕ್ಕೆ ಪಾನಮತ್ತ ಇಬ್ಬರು ಗಾರೆ ಕೆಲಸಗಾರರು ಮಾಡಿಕೊಂಡ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ದೀಪು ಮಂಡಲ್ ಎಂಬಾತ ದೀಪು ಸರ್ಕರ್(30) ಎಂಬುವವರನ್ನು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಜೆಪಿ ನಗರದ 8ನೆ ಹಂತದ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಗಾರೆ ಕೆಲಸಮಾಡಿಕೊಂಡು ಅಲ್ಲಿಯೇ ವಾಸಿಸುತ್ತಿದ್ದ ಇವರಿಬ್ಬರು ರಾತ್ರಿ-ಮದ್ಯ ಸೇವಿಸಿ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ದೀಪು ಮಂಡಲ್ ಆಕ್ರೋಶಗೊಂಡು ದೀಪು ಸರ್ಕರ್‌ ಗೆ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆಗೈದು ಪರಾರಿಯಾಗಿದ್ದಾನೆ. ಬೆಳಿಗ್ಗೆ ಕೆಲಸ ಮಾಡಲು ಇತರ ಕೆಲಸಗಾರರು ಬಂದು ನೋಡಿದಾಗ ಕೊಲೆ ಬೆಳಕಿಗೆ ಬಂದಿದ್ದು, ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಬಂಧನಕ್ಕೆ ಆರೋಪಿಯನ್ನು ಕಾರ್ಯಾಚರಣೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News