ಬೆಂಗಳೂರು: ಜೆಡಿಎಸ್ ಮುಖಂಡ ಅಂದಾನಪ್ಪ ಮನೆಯ ವಾಚ್‌ಮ್ಯಾನ್ ನಿಗೂಢ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ಗುರುವಾರ ನಡೆದಿದೆ.

ಹಾಸನ ಜಿಲ್ಲೆಯ ಅರಸೀಕೆರೆ ಮೂಲದ ನಾಗರಾಜ್(65) ಮೃತ ವ್ಯಕ್ತಿ. ಕಳೆದ ನಾಲ್ಕೈದು ವರ್ಷಗಳಿಂದ ಅಂದಾನಪ್ಪ ಅವರ ಬಳಿ ವಾಚ್‌ಮ್ಯಾನ್ ಮೆನ್ ಆಗಿ ಕೆಲಸ ಮಾಡುತ್ತಿದ್ದ‌ ನಾಗರಾಜ್ ಮೃತದೇಹ, ಅಲ್ಲಿನ ಕಟ್ಟಡದ ಬಳಿಯಿರುವ ಮರವೊಂದಕ್ಕೆ ನೇಣುಹಾಕಿಕೊಂಡ ರೀತಿಯಲ್ಲಿ ಶವ ಪತ್ತೆಯಾಗಿದೆ. ಕೂಡಲೇ ಅಂದಾನಪ್ಪ ಮನೆಯವರು ರಾಜಗೋಪಾಲನಗರ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

 ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಸದ್ಯ ರಾಜಗೋಪಾಲನಗರ ಠಾಣೆಯಲ್ಲಿ ಯುಡಿಆರ್ ((Unnatural Death Report) ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor