ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಯಲಹಂಕದ ರಾಜಾನುಕುಂಟೆ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಮೃತರನ್ನು ವಚನ್ ಹಾಗೂ ಪ್ರದೀಪ್ ಎಂದು ಗುರುತಿಸಲಾಗಿದೆ.

ಇಂದು ಬೆಳಗಿನ ಜಾವ ಇವರಿಬ್ಬರು ಸಂಚರಿಸುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿರಸ್ತೆ ಬದಿಯ ಅಂಗಡಿಯ ಗೋಡೆಯೊಂದಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತಕ್ಕೆ ಅವೈಜ್ಞಾನಿಕ ರಸ್ತೆಯೇ ಕಾರಣ ಎಂದು ಸ್ಥಳಿಯರು ಆರೋಪಿಸಿದ್ದಾರೆ.

ಈ ಬಗ್ಗೆ ಯಲಹಂಕ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor