ನಂಜೇಒಡೆಯರ್ ಸ್ವಾಮೀಜಿ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹುಣಸಮಾರನಹಳ್ಳಿ ಮಠದ ದಯಾನಂದ ಅಲಿಯಾಸ್ ನಂಜೇಒಡೆಯರ್ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ 25 ವರ್ಷದ ಯುವತಿಯೊಬ್ಬರು ಸ್ವಾಮೀಜಿ ವಿರುದ್ಧ ದೂರು ದಾಖಲಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ತಮ್ಮನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ. ಈ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಸ್ವಾಮೀಜಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ನೂರಾರು ಕೋಟಿ ರೂಪಾಯಿ ಮೌಲ್ಯದ ಜಮೀನು ಹೊಂದಿದೆ ಎನ್ನಲಾದ ಹುಣಸಮಾರನಹಳ್ಳಿ ಮಠವು ವೀರಶೈವ-ಲಿಂಗಾಯತ ಸಮುದಾಯದ ಪಂಚಪೀಠಗಳಲ್ಲಿ ಒಂದಾದ ಶ್ರೀಶೈಲ ಮಠದ ಶಾಖಾ ಮಠವಾಗಿದೆ. ಸ್ವಾಮೀಜಿ ಈ ಹಿಂದೆಯೂ ವಿವಾದವೊಂದರಲ್ಲಿ ಸಿಲುಕಿದ್ದರು ಎನ್ನಲಾಗಿದ್ದು, ಇದೀಗ ಮತ್ತೆ ಅವರ ವಿರುದ್ಧ ಆರೋಪ ಕೇಳಿಬಂದಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor