×
Ad

Bengaluru | ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Update: 2025-12-08 20:13 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ನಗರದಲ್ಲಿ ಕೋರಮಂಗಲದ ತಾವರೆಕೆರೆ ಬಳಿಯ ಎಸ್.ಜಿ.ಪಾಳ್ಯದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿರುವುದು ವರದಿಯಾಗಿದೆ.

ಮಗ ಮೌನೀಶ್(14), ತಾಯಿ ಸುಧಾ, ಅಜ್ಜಿ ಮುದ್ದಮ್ಮ ಮೃತರಾಗಿದ್ದು, ಸಾಲ ಹೆಚ್ಚಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೃತರು ಮೂಲತಃ ತಮಿಳುನಾಡಿನವರಾಗಿದ್ದು, ಇತ್ತೀಚೆಗೆ ಧರ್ಮಪುರಿಯ ಒಂದು ದೇವಾಲಯಕ್ಕೆ ಹೋಗಿ ಬಂದಿದ್ದರು. ಬಾಲಕ ಮೌನೀಶ್ ಕ್ರೈಸ್ಟ್ ಶಾಲೆಯಲ್ಲಿ ಏಳನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.

ಸುಧಾ ಮತ್ತು ಮುದ್ದಮ್ಮ ಅವರು ಮೊದಲು ಸಣ್ಣ ಹೋಟೆಲ್‍ನಲ್ಲಿ ಬಿರಿಯಾನಿ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ಲಾಸ್ ಆದ ಬಳಿಕ ಚಿಪ್ಸ್ ಹಾಗೂ ಹಾಲು ಮಾರುತ್ತಿದ್ದರು. ಕೊನೆಗೆ ಮನೆ ಕೆಲಸಕ್ಕೂ ಹೋಗುತ್ತಿದ್ದರು. ಸಾಲ ಹೆಚ್ಚಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸುಧಾ ಅವರು ಕೆಲ ವರ್ಷಗಳ ಹಿಂದೆ ಪತಿಯಿಂದ ಬೇರೆಯಾಗಿದ್ದರು. ತಾಯಿ ಮುದ್ದಮ್ಮ ಜೊತೆಗೆ ಸುಧಾ ಮತ್ತು ಮೌನೀಶ್ ವಾಸಿಸುತ್ತಿದ್ದರು. ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಮೂವರ ಮೃತದೇಹವನ್ನು ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News