×
Ad

ಬೆಂಗಳೂರು : ಇಬ್ಬರನ್ನು ಹತ್ಯೆಗೈದು ಪೊಲೀಸರಿಗೆ ಶರಣಾದ ಆರೋಪಿ

Update: 2024-02-07 23:04 IST

ಬೆಂಗಳೂರು: ಇಬ್ಬರು ವ್ಯಾಪಾರಿಗಳನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ, ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿರುವ ಘಟನೆ ನಗರದ ಕುಂಬಾರಪೇಟೆಯ ಹರಿ ಮಾರ್ಕೇಟಿಂಗ್ ಕಟ್ಟಡದಲ್ಲಿ ಬುಧವಾರ ವರದಿಯಾಗಿದೆ.

ಸುರೇಶ್(55) ಹಾಗೂ ಮಹೇಂದ್ರ (68) ಎಂಬವರನ್ನು ಕೊಲೆಯಾದವರು ಎಂದು ಗುರುತಿಸಲಾಗಿದೆ. ಭದ್ರ ಎಂಬ ಸಂಬಂಧಿಯಿಂದ ಕೃತ್ಯ ನಡೆದಿದ್ದು, ಹತ್ಯೆ ಬಳಿಕ ಆರೋಪಿಯು ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಹಲಸೂರು ಗೇಟ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕುಂಬಾರಪೇಟೆಯ ಅಂಗಡಿಯಲ್ಲಿ ಜೋಡಿ ಕೊಲೆ ಆಗಿದೆ. ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿ ಮತ್ತು ಕೊಲೆಯಾದವರು ದೂರದ ಸಂಬಂಧಿಕರು. ಆಸ್ತಿ ವಿಚಾರವಾಗಿ ಜಗಳ ನಡೆದಿರುವುದು ಪ್ರಾಥಮಿಕವಾಗಿ ಗೊತ್ತಾಗಿದೆ. ಸುರೇಶ್ ಮತ್ತು ಮಹೇಂದ್ರ ಇಬ್ಬರು ಕಿಚನ್ ಉಪಕರಣ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಕೇಂದ್ರ ವಿಭಾಗ ಡಿಸಿಪಿ ಶೇಖರ್ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News