×
Ad

ಬೆಂಗಳೂರು: ವೃದ್ಧೆಯನ್ನು ಕೊಲೆಗೈದು ಮೃತದೇಹವನ್ನು ತುಂಡರಿಸಿ ಡ್ರಮ್ ನಲ್ಲಿ ತುಂಬಿಸಿಟ್ಟ ಹಂತಕ

Update: 2024-02-26 11:03 IST

ಬೆಂಗಳೂರು, ಫೆ.26: ದುಷ್ಕರ್ಮಿಗಳು ವೃದ್ಧೆಯೊಬ್ಬರನ್ನು ಹತ್ಯೆ ಮಾಡಿ ಮೃತದೇಹವನ್ನು ತುಂಡರಿಸಿ ಡ್ರಮ್ನಲ್ಲಿಟ್ಟು ಪರಾರಿಯಾಗಿರುವ ಘಟನೆ ಕೆ.ಆರ್. ಪುರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದಿದೆ.

ಇಲ್ಲಿನ ನಿಸರ್ಗ ಲೇಔಟ್ನ ಸರೋಜಮ್ಮ (78) ಕೊಲೆಯಾದವರು. ಸರೋಜಮ್ಮ ವಾಸವಿದ್ದ ಮನೆಯಿಂದ ರವಿವಾರ ದುರ್ವಾಸನೆ ಬರುತ್ತಿದ್ದುದರಿಂದ ಅನುಮಾನಗೊಂಡ ಸ್ಥಳೀಯರು ಕೆ.ಆರ್. ಪುರ ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮನೆಗೆ ತೆರಳಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸರೋಜಮ್ಮ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಮಗ, ಪ್ರತ್ಯೇಕವಾಗಿ ವಾಸವಿದ್ದಾರೆ. ಮಗಳ ಜೊತೆ ಸರೋಜಮ್ಮ ನೆಲೆಸಿದ್ದರು. ಇವರ ಕೊಲೆಗೆ ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

‘ಸರೋಜಮ್ಮರನ್ನು ಎರಡು ದಿನಗಳ ಹಿಂದೆಯೇ ಕೊಲೆ ಮಾಡಿರುವ ಸಂಶಯವಿದೆ. ಕೊಲೆ ನಂತರ, ಮೃತದೇಹವನ್ನು ತುಂಡರಿಸಿ ಡ್ರಮ್ ನಲ್ಲಿ ತುಂಬಿಡಲಾಗಿದೆ. ಪರಿಚಯಸ್ಥರೇ ಕೃತ್ಯ ಎಸಗಿರುವ ಶಂಕೆಯಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ’ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News