×
Ad

ಬೆಂಗಳೂರು | ನಿವೃತ್ತ ಎಸಿಪಿ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಮೂವರ ಬಂಧನ

Update: 2025-09-12 19:07 IST
ಸಾಂದರ್ಭಿಕ ಚಿತ್ರ | PC : freepik

ಬೆಂಗಳೂರು, ಸೆ.12: ವಾಕಿಂಗ್ ಮುಗಿಸಿ ಮನೆಗೆ ಹೋಗುತ್ತಿದ್ದ ನಿವೃತ್ತ ಎಸಿಪಿ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ದರೋಡೆ ಮಾಡಿಕೊಂಡು ಪರಾರಿಯಾಗಿದ್ದ ಪ್ರಕರಣದಡಿ ಮೂವರು ಆರೋಪಿಗಳನ್ನು ಇಲ್ಲಿನ ಸಂಜಯನಗರ ಠಾಣೆಯ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಡಿ.ಜೆ.ಹಳ್ಳಿಯ ನಿವಾಸಿಗಳಾದ ಸೈಯ್ಯದ್ ಮೊಹ್ಸಿನ್(30), ಮುಹಮ್ಮದ್ ಸಲ್ಮಾನ್(20) ಹಾಗೂ ಸೈಯ್ಯದ್ ಇರ್ಫಾನ್(23) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಇತ್ತೀಚೆಗೆ ಹೆಬ್ಬಾಳದ ಪಶು ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಬಳಿ ಹಾಡಹಗಲೇ ನಿವೃತ್ತ ಎಸಿಪಿ ಎಚ್.ಸುಬ್ಬಣ್ಣ ಅವರ ಮೇಲೆ ಚಾಕುವಿನಿಂದ ಹಲ್ಲೆಗೈದಿದ್ದ ಆರೋಪಿಗಳು 8 ಲಕ್ಷ ರೂ. ಮೌಲ್ಯದ ಚಿನ್ನದ ಸರ ಹಾಗೂ ಬ್ರೇಸ್‍ಲೆಟ್ ಕಿತ್ತುಕೊಂಡು ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ

ಈ ಬಗ್ಗೆ ಸುಬ್ಬಣ್ಣ ಅವರು ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ, ಅದರ ಆಧಾರದ ಮೇಲೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News