ಎಚ್.ಪ್ರಸನ್ನ

ಬೆಂಗಳೂರು: ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಪೈಕಿ ಇಬ್ಬರನ್ನು ಕರ್ನಾಟಕ ಲೋಕಸೇವಾ ಆಯೋಗ(KPSC)ದ ವಿವಿಧ ಹುದ್ದೆಗಳಿಗೆ ನೇಮಕ ಮಾಡಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಕ್ಸಿಕ್ಯೂಟಿವ್ ಡೈರೆಕ್ಟರ್ ಎಚ್.ಪ್ರಸನ್ನರಿಗೆ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರಾಗಿ ಹೆಚ್ಚುವರಿ ಕಾರ್ಯಭಾರ ವಹಿಸಲಾಗಿದೆ. ಸದ್ಯ ಕೆಪಿಎಸ್ ಸಿಯ ಪರೀಕ್ಷಾ ನಿಯಂತ್ರಕ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ದಿಗ್ವಿಜಯ್ ಬೋಡ್ಕೆಯವರನ್ನು ವರ್ಗಾವಣೆ ಮಾಡಲಾಗಿದ್ದು, ಅವರಿಗೆ ಯಾವುದೇ ಹುದ್ದೆ ಸೂಚಿಸಿಲ್ಲ.

ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದ ಲವಿಶ್ ಓರ್ಡಿಯಾರನ್ನು ಕೆಪಿಎಸ್ ಸಿ ಜಂಟಿ ಪರೀಕ್ಷಾ ನಿಯಂತ್ರಕ ಹುದ್ದೆಗೆ ನೇಮಕ ಮಾಡಲಾಗಿದೆ. ಯಾದಗಿರಿ ಜಿಪಂ ಸಿಇಒ ಹುದ್ದೆಗೆ ಯಾರನ್ನು ನೇಮಿಸಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor