ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: 10 ಶಾಲಾ ವಾಹನಗಳ ಜಪ್ತಿ
Update: 2025-07-11 20:24 IST
ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು : ಬೆಂಗಳೂರು ಉತ್ತರ ವಿಭಾಗದ ಸಂಚಾರ ಪೊಲೀಸರು ಹಾಗೂ ಆರ್‌ಟಿಓ ಅಧಿಕಾರಿಗಳ ಸಹಯೋಗದೊಂದಿಗೆ ಶುಕ್ರವಾರ ಕಾರ್ಯಾಚರಣೆ ನಡೆಸಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದ 10 ಶಾಲಾ ವಾಹನಗಳನ್ನು ಜಪ್ತಿ ಮಾಡಿದ್ದಾರೆ.
ಜು.11ರ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ 9 ಗಂಟೆಯ ವರೆಗೆ ಉತ್ತರ ಸಂಚಾರ ವಿಭಾಗದಲ್ಲಿ ಶಾಲಾ ವಾಹನಗಳ ವಿರುದ್ಧ ವಿಶೇಷ ಕಾರ್ಯಚರಣೆ ನಡೆಸಿ, ಅಧಿಕ ಮಕ್ಕಳನ್ನು ಕರೆದೊಯ್ಯುವುದು, ಮದ್ಯಸೇವನೆ ಮಾಡಿ ವಾಹನ ಚಾಲನೆ ಸೇರಿದಂತೆ ವಿವಿಧ ಸಂಚಾರಿ ನಿಯಮ ಉಲ್ಲಂಘನೆ ಬಗ್ಗೆ ಒಟ್ಟು 771 ವಾಹನಗಳನ್ನು ತಪಾಸಣೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಾರ್ಯಚರಣೆಯಲ್ಲಿ 6 ಡಿಡಿ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಸಂಚಾರ ಪೊಲೀಸರು 10 ವಾಹನಗಳನ್ನು ಜಪ್ತಿ ಮಾಡಿ, ಆರ್‌ಟಿಓ ಅವರಿಂದ ನೋಟಿಸ್ ನೀಡಲಾಗಿದೆ ಎಂದು ಉಪ ಪೊಲೀಸ್ ಆಯುಕ್ತೆ ಸಿರಿಗೌರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.