×
Ad

ಕಾಂತರಾಜು ಆಯೋಗದ ವರದಿ ಬಹಿರಂಗಕ್ಕೆ ಒತ್ತಾಯಿಸಿ ನಾಳೆ(ಜ.10) ʼಬೆಂಗಳೂರು ವಿವಿ ಬಂದ್’

Update: 2024-01-09 19:34 IST

ಬೆಂಗಳೂರು: ಕಾಂತರಾಜು ಆಯೋಗ ವರದಿ ಬಹಿರಂಗಪಡಿಸುವಂತೆ ಒತ್ತಾಯಿಸಿ ನಾಳೆ(ಜ.10) ಬೆಂಗಳೂರು ವಿಶ್ವ ವಿದ್ಯಾಲಯ ಬಂದ್ ಮಾಡಲಾಗುವುದು ಎಂದು ಬೆಂಗಳೂರು ವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿ ಒಕ್ಕೂಟ ಕರೆ ನೀಡಿದೆ.

ಸಾಮಾಜಿಕ, ಆರ್ಥಿಕ ಸಮೀಕ್ಷೆಯನ್ನು ನಡೆಸುವಂತೆ ಸರಕಾರವು ಕಾಂತರಾಜ್ ಆಯೋಗ ರಚಿಸಿತ್ತು. ವರದಿಯನ್ನು ಆಯೋಗವು ಸಕಾಲದಲ್ಲಿ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಲ್ಲಿಕೆ ಮಾಡಿದೆ. ಆದರೆ ಸರಕಾರವು ಅದನ್ನು ಸ್ವೀಕರಿಸಿ ಬಹಿರಂಗ ಪಡಿಸುವಲ್ಲಿ ಹಿಂದೇಟು ಹಾಕುತ್ತಿದೆ ಎಂದು ಒಕ್ಕೂಟವು ಆರೋಪಿಸಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವ ವಿದ್ಯಾಲಯದ ಅಂಬೇಡ್ಕರ್ ಕೇಂದ್ರ ಗ್ರಂಥಾಲಯದಿಂದ ಕೇಂದ್ರ ಕಚೇರಿ ಆವರಣಕ್ಕೆ ಪ್ರತಿಭಟನಾ ರ್ಯಾಲಿಯನ್ನು ಆಯೋಜಿಸಲಾಗುವುದು. ರ್ಯಾಲಿಯಲ್ಲಿ 3ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. ಸರಕಾರವು ಕಾಂತರಾಜ್ ಆಯೋಗ ವರದಿ ಸ್ವೀಕರಿಸಿ ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಲಾಗುವುದು ಎಂದು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News