ಬೆಂಗಳೂರು: ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
Update: 2025-10-22 14:53 IST
ಬೆಂಗಳೂರು, ಅ.22: ಬೆಂಗಳೂರಿನ ಗಂಗೊಂಡನಹಳ್ಳಿಯಲ್ಲಿ ದುಷ್ಕರ್ಮಿಗಳು ಮದ್ಯ ಸೇವಿಸಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ವರದಿಯಾಗಿದೆ.
ಮಂಗಳವಾರ ರಾತ್ರಿ ಮನೆಗೆ ನುಗ್ಗಿದ ಮೂವರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ. ಸಂತ್ರಸ್ತೆ ನೀಡಿರುವ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಆರೋಪಿಗಳು ಅಪರಾಧ ಎಸಗುವ ಮುನ್ನ ಮದ್ಯಪಾನ ಮಾಡಿದ್ದರು ಎನ್ನಲಾಗಿದೆ. ಪ್ರಕರಣದ ನಂತರ ಆರೋಪಿಗಳು ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.