×
Ad

ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವತಿ ಮೃತ್ಯು

Update: 2023-12-25 19:36 IST

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜಧಾನಿಯಲ್ಲಿ ಇತ್ತೀಚೆಗಷ್ಟೇ ನಡೆದ ಗ್ಯಾಸ್ ಗೀಸರ್ ಸೋರಿಕೆಯಾಗಿ ಮಹಿಳೆ ಸಾವನ್ನಪ್ಪಿದ ಪ್ರಕರಣ ಮಾಸುವ ಮುನ್ನವೇ ಬಸವೇಶ್ವರ ನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವತಿ ಮೃತಪಟ್ಟಿರುವ ಮತ್ತೊಂದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ರಾಜೇಶ್ವರಿ(23) ಮೃತ ಯುವತಿ. ಡಿ.20ರ ಮಧ್ಯಾಹ್ನ  2ಗಂಟೆ ಸುಮಾರಿಗೆ ಸ್ನಾನಕ್ಕೆ ತೆರಳಿದ್ದ ರಾಜೇಶ್ವರಿ ಬಹಳ ಸಮಯವಾದರೂ ಹೊರಗಡೆ ಬಂದಿರಲಿಲ್ಲ. ನಂತರ ಮನೆಯವರು ಬಾಗಿಲು ತೆಗೆದು ನೋಡಿದಾಗ ರಾಜೇಶ್ವರಿ ತೀವ್ರ ಅಸ್ವಸ್ಥಳಾಗಿರುವುದು ತಿಳಿದಿದೆ.

ತಕ್ಷಣ ಆಕೆಯನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಧೃಡಪಡಿಸಿದ್ದಾರೆ. ಈ ಘಟನೆ ಸಂಬಂಧ ನಗರದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News