ಬೆಂಗಳೂರು : ಸುಳ್ಳು ಹಬ್ಬಿಸುವ ಆರೋಪದ ಅಡಿಯಲ್ಲಿ ಬಿಜೆಪಿ ನಾಯಕ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ವಿರುದ್ಧ ಪ್ರಕರಣ ದಾಖಲಿಸುವ ಜೊತೆಗೆ ಅವರ ಸೇವಾ ಅವಧಿಯಲ್ಲಿ ನ್ಯೂನತೆಗಳ ರಾಶಿ ಇರುವ ಅನುಮಾನ ಇದ್ದು, ತನಿಖೆ ನಡೆಸುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ದೂರು ಸಲ್ಲಿಸಲಾಗಿದೆ.

ಸೋಮವಾರ ಈ ಸಂಬಂಧ ಕೆಪಿಸಿಸಿಯ ಸೇವಾದಳ ಯಂಗ್ ಬ್ರಿಗೇಡ್ ರಾಜ್ಯ ಘಟಕದ ಅಧ್ಯಕ್ಷ ಜುನೈದ್ ಪಿ.ಕೆ. ದೂರು ಸಲ್ಲಿಸಿದ್ದು, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ(ಎಸ್‌ಐಆರ್)ಯಲ್ಲಿ ಲೋಪ ಸೇರಿದಂತೆ ಚುನಾವಣೆ ಅಕ್ರಮಗಳಿಗೆ ನೇರ ಕಾರಣವಾಗಿರುವ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್, ಸಿಜೆಪಿ, ಎಡಪಕ್ಷಗಳು ಸೇರಿದಂತೆ ದೇಶದ ನಾಗರಿಕರು ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ ಬೆಂಬಲ ಸೂಚಿಸುವ ಹಿನ್ನೆಲೆ ಅ.8ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನ ಮೈದಾನದಲ್ಲಿ ಜನಾದೇಶ ಸಮಾವೇಶ ಏರ್ಪಡಿಸಲಾಗಿತ್ತು. ಇದರಲ್ಲಿ ಮುಖ್ಯ ಅತಿಥಿಯಾಗಿ ಖ್ಯಾತ ಯೂಟ್ಯೂಬರ್, ರಾಜಕೀಯ ವಿಶ್ಲೇಷಕ ಧ್ರುವ್ ರಾಠಿ ಅವರು ಪಾಲ್ಗೊಂಡಿದ್ದರು. ಧ್ರುವ್ ರಾಠಿ ಅವರನ್ನು ವಿದೇಶಿ ಪ್ರಜೆ ಎಂದು ಬಿಜೆಪಿ ನಾಯಕ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor