×
Ad

ಚನ್ನಪಟ್ಟಣ | ಫೇಸ್‌ಬುಕ್‌ ಪೋಸ್ಟ್ ಹಾಕಿ ಸಾಹಿತಿ, ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ ಆತ್ಮಹತ್ಯೆ

Update: 2024-07-29 12:20 IST

ಭೂಹಳ್ಳಿ ಪುಟ್ಟಸ್ವಾಮಿ

ಚನ್ನಪಟ್ಟಣ : ಅನಾರೋಗ್ಯದಿಂದ ಬಳಲುತ್ತಿದ್ದ ಸಾಹಿತಿ ಹಾಗೂ ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ (76) ಅವರು ಫೇಸ್‌ಬುಕ್‌ ಪೋಸ್ಟ್ ಹಾಕಿ ರವಿವಾರ ತಡರಾತ್ರಿ ಚನ್ನಪಟ್ಟಣದಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

ಪುಟ್ಟಸ್ವಾಮಿ ಅವರ ಕುಟುಂಬ ಮೈಸೂರಿನಲ್ಲಿ ನೆಲೆಸಿತ್ತು. ಆದರೆ, ಪುಟ್ಟಸ್ವಾಮಿ ಅವರು ಮಾತ್ರ ಚನ್ನಪಟ್ಟಣದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು ಎಂದು ತಿಳಿದು ಬಂದಿದೆ.

ಭೂಹಳ್ಳಿ ಪುಟ್ಟಸ್ವಾಮಿ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ‘ನನ್ನ ಸಾವಿಗೆ ನಾನೇ ಕಾರಣ. ಅನಾರೋಗ್ಯದಿಂದ ಬೇಸರಗೊಂಡ ಜೀವನ ಯಾತ್ರೆ ಮುಗಿಸುತ್ತಿದ್ದೇನೆ. 28.07.24 ರಾತ್ರಿ 2.40 ಇತಿ ಭೂಹಳ್ಳಿ ಪುಟ್ಟಸ್ವಾಮಿ’ ಎಂದು ಪೋಸ್ಟ್ ಮಾಡಿ ಚನ್ನಪಟ್ಟಣದಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News