Bidadi | ನಕಲಿ ಔಷಧಗಳ ಮರು ಪ್ಯಾಕಿಂಗ್ ಜಾಲ; ಆಹಾರ ಸುರಕ್ಷತೆ-ಔಷಧ ಆಡಳಿತ ವಿಭಾಗದ ಅಧಿಕಾರಿಗಳಿಂದ ದಾಳಿ

5 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ನಕಲಿ ಔಷಧ ವಶ

Update: 2026-08-18 22:38 IST

ಸಾಂದರ್ಭಿಕ ಚಿತ್ರ |  PC : Image by wirestock on Magnific

ಬೆಂಗಳೂರು : ರಾಜ್ಯದಲ್ಲಿ ಸಾರ್ವಜನಿಕರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಹೊಟೇಲ್‍ಗಳ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವಿಭಾಗದ ಅಧಿಕಾರಿಗಳು, ಇದೀಗ ಅನಧಿಕೃತವಾಗಿ ಔಷಧ ತಯಾರಿಕೆಯಲ್ಲಿ ತೊಡಗಿದ್ದ ಕಂಪೆನಿಯೊಂದರ ಮೇಲೆ ದಾಳಿ ನಡೆಸಿದ್ದಾರೆ.

ಇಲ್ಲಿನ ಬೆಂಗಳೂರು-ಮೈಸೂರು ರಸ್ತೆಯಲ್ಲಿನ ಬಿಡದಿ ಸಮೀಪದ ಟೋಲ್ ಬಳಿ ಬಹುರಾಷ್ಟ್ರೀಯ ಕಂಪೆನಿಯೊಂದು ನಕಲಿ ಔಷಧಗಳನ್ನು ಮರು ಪ್ಯಾಕ್ ಮಾಡುತ್ತಿದ್ದ ದಂಧೆಯನ್ನು ಬಯಲು ಮಾಡಿದ್ದಾರೆ. ಈ ಸಂಬಂಧ ಸುಮಾರು 5 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ನಕಲಿ ಔಷಧಗಳನ್ನು ವಶಪಡಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆಂದು ಮಾಹಿತಿ ಸಿಕ್ಕಿದೆ.

ಈ ಕಂಪೆನಿಯು ಯಾವುದೇ ಪರವಾನಗೆ ಇಲ್ಲದೆ ಕಾರ್ಯನಿರ್ವಹಿಸುತ್ತಿರುವುದು ಗೊತ್ತಾಗಿದೆ. ಈ ಸಂಬಂಧ ರಾಜ್ಯ ಸರಕಾರದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವಿಭಾಗದ ಅಧಿಕಾರಿಗಳು ಪರಿಶೀಲನೆ ಕಾರ್ಯವನ್ನು ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News