×
Ad

ಬಿಜೆಪಿ ನಾಯಕರು ರಾಜ್ಯದ ಜನರ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2025-04-20 13:27 IST

ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಜಾತಿ ಗಣತಿ ವರದಿ ಅವೈಜ್ಞಾನಿಕ ಎಂದಿರುವ ಬಿಜೆಪಿ ವಿರುದ್ಧ ಕಿಡಿಕಾರಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಬಿಜೆಪಿ ನಾಯಕರು ರಾಜ್ಯದ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲೇ. ಜಾತಿ ಗಣತಿ ಅಧ್ಯಯನ ಮಾಡಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲೇ. ಆಗಲೇ ಬಿಜೆಪಿಯವರೇ ಜಾತಿಗಣತಿಯನ್ನು ತಿರಸ್ಕರಿಸಬಹುದಿತ್ತು. ಆದರೀಗ ಬಿಜೆಪಿ ನಾಯಕರು ಜಾತಿಗಣತಿಯನ್ನು ಅವೈಜ್ಞಾನಿಕ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಕಿಡಿಕಾರಿದರು.

ಪೂರ್ಣ ಚರ್ಚೆಯ ಬಳಿಕವಷ್ಟೇ ಪ್ರತಿಕ್ರಿಯಿಸುವೆ :

ಜಾತಿ ಗಣತಿ ವರದಿ ಇನ್ನೂ ಚರ್ಚೆಯ ಹಂತದಲ್ಲಿದೆ. ಮೊನ್ನೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆಯಷ್ಟೇ ಆಗಿದೆ. ಇದರ ಬಗ್ಗೆ ಇನ್ನಷ್ಟು ಚರ್ಚೆ ಆಗಬೇಕಿದೆ. ಸಂಪೂರ್ಣವಾಗಿ ಕ್ಯಾಬಿನೆಟ್ ನಲ್ಲಿ ಚರ್ಚೆ ಆದ ಬಳಿಕವಷ್ಟೇ ಪ್ರತಿಕ್ರಿಯಿಸುವುದಾಗಿ ಹೇಳಿದರು.

ಜಾತಿಗಣತಿ ವರದಿ ಬಗ್ಗೆ ಇರುವ ಉಹಾಪೋಹಗಳಿಗೆ ಎಡೆಮಾಡಿಕೊಡುವುದು ಬೇಡ. ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದೇ ನಮ್ಮ ಉದ್ದೇಶ. ಜಾತಿಗಣತಿಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯ ವೇಳೆ ಸಚಿವರ ನಡುವೆ ಗಲಾಟೆ, ವಾಗ್ವಾದ ನಡೆದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News