×
Ad

ಎಫ್‌ಐಆರ್ ರದ್ದು ಕೋರಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೈಕೋರ್ಟ್‌ಗೆ ಅರ್ಜಿ

Update: 2025-05-07 23:46 IST

ಬೆಂಗಳೂರು : ಕೋಮು ದ್ವೇಷ ಆರೋಪದ ಹಿನ್ನೆಲೆ ತಮ್ಮ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಆನಂತರ ಕಾನೂನು ಪ್ರಕ್ರಿಯೆ ರದ್ದತಿ ಕೋರಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ತೆಕ್ಕಾರುವಿನ ಎಸ್.ಬಿ.ಇಬ್ರಾಹಿಂ ಸಲ್ಲಿಸಿರುವ ದೂರಿನ ಆಧಾರದಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದತಿ ಕೋರಿ ಹರೀಶ್ ಪೂಂಜಾ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವಂತೆ ಅವರ ಪರ ವಕೀರು, ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರ ಏಕಸದಸ್ಯ ರಜಾಕಾಲದ ಪೀಠಕ್ಕೆ ಕೋರಿದರು.

ಆಗ ನ್ಯಾಯಮೂರ್ತಿ, ಇದು ಜನಪ್ರತಿನಿಧಿಗೆ ಸಂಬಂಧಿಸಿದ ಪ್ರಕರಣವಾಗಿದ್ದು, ಈ ನ್ಯಾಯಾಲಯಕ್ಕೆ ಆ ವ್ಯಾಪ್ತಿ ಇಲ್ಲ. ಈ ಸಂಬಂಧ ಮುಖ್ಯ ನ್ಯಾಯಮೂರ್ತಿಯಿಂದ ನಿರ್ದೇಶನ ಪಡೆದು, ಆದೇಶವಾದರೆ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದರು.

ಸಾಕಷ್ಟು ಸಮಾಲೋಚನೆಯ ಬಳಿಕ ಮುಖ್ಯ ನ್ಯಾಯಮೂರ್ತಿಯವರ ಆದೇಶಕ್ಕೆ ಒಳಪಟ್ಟು ಅರ್ಜಿಯನ್ನು ಮೇ 8ಕ್ಕೆ ವಿಚಾರಣೆಗೆ ಪಟ್ಟಿ ಮಾಡಲು ಆದೇಶಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News