Photo: x.com/ChekrishnaCk

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿಯೇ ಬಿಜೆಪಿ ಶಾಸಕ ಮುನಿರತ್ನ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆನ್ನಲಾದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಸದಾಶಿವನಗರದ ಖಾಲಿ ನಿವೇಶನವೊಂದರ ಬಳಿ ಮೂರ್ತ ವಿಸರ್ಜನೆ ಮಾಡುತ್ತಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಯುವಕನೊಬ್ಬ ಪ್ರಶ್ನೆ ಮಾಡಿದ್ದಾನೆ. ಆಗ ಯುವಕ ಹಾಗೂ ಶಾಸಕರ ನಡುವೆ ವಾಗ್ವಾದ ಸೃಷ್ಟಿಯಾಗಿದೆ. ಈ ವೇಳೆ ಶಾಸಕ ಮುನಿರತ್ನ ಯುವಕನ ತಾಯಿಯ ಬಗ್ಗೆ ನಿಂದನೆ ಮಾಡಿದ್ದಾರೆ ಎಂದು ಯುವಕನು ಮುನಿರತ್ನ ಅವರ ಕತ್ತಿನ ಪಟ್ಟಿ ಹಿಡಿದಿದ್ದಾನೆ ಎನ್ನಲಾಗಿದೆ.

ಸ್ಥಳದಲ್ಲಿದ್ದ ಸಾರ್ವಜನಿಕರು ಯುವಕ ಹಾಗೂ ಶಾಸಕರ ನಡುವೆ ವಾಗ್ವಾದವನ್ನು ಮೊಬೈಲ್‍ನಲ್ಲಿ ಚಿತ್ರೀಕರಿಸಿದ್ದಾರೆ. ಪರಿಸ್ಥತಿ ತೀವ್ರಗೊಳ್ಳುತ್ತಿದ್ದಂತೆ ಶಾಸಕರು ಮಂಕಾಗಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor