ಅಮೆರಿಕದಿಂದ ನಮ್ಮ ಸೈನ್ಯಕ್ಕೆ ಅಪಮಾನ: ಬಿ.ಕೆ.ಹರಿಪ್ರಸಾದ್
Update: 2025-05-13 00:56 IST
ಬೆಂಗಳೂರು : ಅಮೆರಿಕ ನಮ್ಮ ಸೈನ್ಯಕ್ಕೆ ಹೇಳುವಂತಾಗಿದ್ದು, ಇದರಿಂದ ನಮ್ಮ ಸೈನ್ಯಕ್ಕೆ ಅಪಮಾನ ಆಗಿದೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ನಾವು ಶಿಮ್ಲಾ ಒಪ್ಪಂದ ಮಾಡಿಕೊಂಡಿದ್ದೆವು. ಇದು ಬೇರೆ ದೇಶಗಳು ತಲೆಹಾಕದಂತೆ ಮಾಡಿಕೊಂಡ ಒಪ್ಪಂದವಾಗಿತ್ತು. ಆದರೆ, ಈಗ ಇದೆಲ್ಲವನ್ನು ಗಾಳಿಗೆ ತೂರಿದ್ದಾರೆ. ನಮ್ಮ ಸೈನ್ಯ ದಿಟ್ಟತನದಿಂದ ಹೋರಾಡಿದೆ. ಆದರೆ, ಅಮೆರಿಕ ಅಧ್ಯಕ್ಷ ಟ್ರಂಪ್ ಕದನ ವಿರಾಮ ಘೋಷಿಸಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.