ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಪ್ರತಿಪಾದಕ : ಬಿ.ಕೆ.ಹರಿಪ್ರಸಾದ್
ಬೆಂಗಳೂರು : ರಾಜ್ಯ ರಾಜಕಾರಣದ ಚರಿತ್ರೆಯಲ್ಲೆ ಅತಿ ಹೆಚ್ಚು ಅವಧಿಯ ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸುತ್ತಿರುವ ನಾಡಿನ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಪ್ರತಿಪಾದಕರಾಗಿರುವ ಸಿದ್ದರಾಮಯ್ಯ ಅವರಿಗೆ ಶುಭಾಶಯಗಳು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ತಿಳಿಸಿದ್ದಾರೆ.
ಮಂಗಳವಾರ ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಈ ನಾಡು ಕಂಡ ದಮನಿತ ವರ್ಗಗಳ, ಶೋಷಿತ ಸಮುದಾಯಗಳ ಆಶಾಕಿರಣವಾಗಿದ್ದ ‘ಅರಸು’ ಅವರ ದಾಖಲೆಯನ್ನು ಸರಿಗಟ್ಟಿದ ಸಿದ್ದರಾಮಯ್ಯನವರು ಸಂವಿಧಾನ, ಪ್ರಜಾಪ್ರಭುತ್ವ, ಸಮಾಜವಾದಿ ಮೌಲ್ಯಗಳ ರಕ್ಷಣೆಗೆ ಕಟ್ಟಿಬದ್ದರಾಗಿ, ಬಡ ಜನರ, ಹಿಂದುಳಿದ, ದೀನ-ದಲಿತರ ಆಶೋತ್ತರಗಳಿಗುಣವಾಗಿ ಮತ್ತಷ್ಟು ಈ ನಾಡಿಗೆ ತಮ್ಮ ಸೇವೆ ಸಲ್ಲಿಸಲಿ ಎಂದು ಹಾರೈಸಿದ್ದಾರೆ.
ರಾಜ್ಯ ರಾಜಕಾರಣದ ಚರಿತ್ರೆಯಲ್ಲೇ ಅತಿ ಹೆಚ್ಚು ಅವಧಿಯ ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸುತ್ತಿರುವ ನಾಡಿನ ಮುಖ್ಯಮಂತ್ರಿಗಳು, ಸಾಮಾಜಿಕ ನ್ಯಾಯದ ಪ್ರತಿಪಾದಕರಾಗಿರುವ ಶ್ರೀ @siddaramaiah ಅವರಿಗೆ ಶುಭಾಶಯಗಳು.
— Hariprasad.B.K. (@HariprasadBK2) January 6, 2026
ಈ ನಾಡು ಕಂಡ ದಮನಿತ ವರ್ಗಗಳ, ಶೋಷಿತ ಸಮುದಾಯಗಳ ಆಶಾಕಿರಣವಾಗಿದ್ದ "ಅರಸು"ಅವರ ದಾಖಲೆಯನ್ನು ಸರಿಗಟ್ಟಿದ
ಶ್ರೀ… pic.twitter.com/2QER6cz2hy