×
Ad

ಬೆಂಗಳೂರಿನ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ​

Update: 2024-11-07 19:30 IST

ಸಾಂದರ್ಭಿಕ ಚಿತ್ರ(PTI)

ಬೆಂಗಳೂರು : ಬಿಷಪ್ ಕಾಟನ್ ಶಾಲೆಯ ವೆಬ್‍ಸೈಟ್‍ಗೆ ದುಷ್ಕರ್ಮಿಗಳು ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದು, ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುರುವಾರ ಬೆಳಗ್ಗೆ ಬಂದಿದ್ದ ಸಂದೇಶವನ್ನು ಆಡಳಿತ ಮಂಡಳಿ ಮಧ್ಯಾಹ್ನ ಗಮನಿಸಿದ್ದು, ಆನಂತರ, ಬೆದರಿಕೆ ಸಂದೇಶದ ಮಾಹಿತಿ ಪೊಲೀಸರಿಗೆ ತಿಳಿಸಿದ್ದಾರೆ.

ಇತ್ತೀಚಿಗೆ ನಗರದ ಬಿಎಂಎಸ್, ಎಂಎಸ್ ರಾಮಯ್ಯ ಹಾಗೂ ಬಿಐಟಿ ಇಂಜಿನಿಯರಿಂಗ್ ಕಾಲೇಜಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದವು. ಇದರಿಂದ ಕಾಲೇಜು ಆವರಣಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News