×
Ad

ಬೆಂಗಳೂರು: ಬಿಬಿಎಂಪಿ ಮೈದಾನದ ಗೇಟ್ ಬಿದ್ದು ಬಾಲಕ ಮೃತ್ಯು

Update: 2024-09-22 20:59 IST

Photo credit: news18.com

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ(ಬಿಬಿಎಂಪಿ) ಆಟದ ಮೈದಾನದ ಗೇಟ್ ಮೈಮೇಲೆ ಬಿದ್ದ ಪರಿಣಾಮ ಬಾಲಕ ಮೃತಪಟ್ಟಿರುವ ಘಟನೆ ಇಲ್ಲಿನ ಮಲ್ಲೇಶ್ವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರವಿವಾರ ವರದಿಯಾಗಿದೆ.

ನಿರಂಜನ್(11) ಎಂಬಾತ ಮೃತ ಬಾಲಕ ಎಂದು ಗುರುತಿಸಲಾಗಿದೆ. ಕಬ್ಬಿಣದ ಗೇಟ್ ಮೈಮೇಲೆ ಬಿದ್ದ ಪರಿಣಾಮ ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ನಿರಂಜನ್, ನಗರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಪೋಷಕರೊಂದಿಗೆ ಪ್ಯಾಲೇಸ್ ಗುಟ್ಟಹಳ್ಳಿಯ ವಿವೇಕಾನಂದ ಬ್ಲಾಕ್‍ನಲ್ಲಿ ವಾಸವಿದ್ದ ನಿರಂಜನ್, ರವಿವಾರ ಮಧ್ಯಾಹ್ನ ಆಟವಾಡಲು ಮಲ್ಲೇಶ್ವರಂನ ರಾಜಶಂಕರ್ ಆಟದ ಮೈದಾನಕ್ಕೆ ಬಂದಿದ್ದ. ಮೈದಾನದ ಕಬ್ಬಿಣದ ಗೇಟ್ ತೆಗೆಯುವಾಗ ಏಕಾಏಕಿ ಮೈಮೇಲೆ ಬಿದ್ದಿದೆ. ಪರಿಣಾಮ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದರಿಂದ ನಿರಂಜನ್‍ನನ್ನು ಪೋಷಕರು ಕೆ.ಸಿ.ಜನರಲ್ ಆಸ್ಪತ್ರೆಗೆ ಕೊಂಡೊಯ್ದಿದ್ದರು. ಆದರೆ ರಕ್ತಸ್ರಾವದಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆ ಸಂಬಂಧ ಸ್ಥಳಕ್ಕೆ ಮಲ್ಲೇಶ್ವರಂ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News