×
Ad

ಉಪಚುನಾವಣೆ ಹಿನ್ನೆಲೆ: ಕಾಂಗ್ರೆಸ್ ಉಸ್ತುವಾರಿ ಸಮಿತಿ ರಚನೆ

Update: 2026-03-08 21:45 IST

ಸಾಂದರ್ಭಿಕ ಚಿತ್ರ | Photo Credit : PTI

ಬೆಂಗಳೂರು : ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಸಚಿವರು ಸೇರಿದಂತೆ 31 ಮಂದಿಗೆ ಜವಾಬ್ದಾರಿ ನೀಡುವ ಉಸ್ತುವಾರಿ ಸಮಿತಿ ರಚನೆ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ, ನಮ್ಮ ಪಕ್ಷದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗಾಗಿ ಹಾಗೂ ನಮ್ಮ ಅಭ್ಯರ್ಥಿಯು ಜಯಶಾಲಿಯಾಗಲು ಅಗತ್ಯ ಚುನಾವಣಾ ತಂತ್ರಗಳನ್ನು ರೂಪಿಸುವ ಸಲುವಾಗಿ ಎಐಸಿಸಿ ನಿರ್ದೇಶನದ ಮೇರೆಗೆ ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆ ಉಸ್ತುವಾರಿ ಸಮಿತಿಯನ್ನು ರಚಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಸಮಿತಿಯು ಕ್ಷೇತ್ರದಲ್ಲಿ ನಮ್ಮ ಪಕ್ಷದ ಸಂಭಾವ್ಯ ಅಭ್ಯರ್ಥಿಯನ್ನು ಕೆಪಿಸಿಸಿಗೆ ಶಿಫಾರಸ್ಸು ಮಾಡಬೇಕು. ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯ ಗೆಲುವಿಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವ ಪ್ರಕ್ರಿಯೆಯಲ್ಲಿ ದಾವಣಗೆರೆ, ಬಾಗಲಕೋಟೆ ಜಿಲ್ಲೆಯ ಸಚಿವರು, ಸಂಸದರು, ಶಾಸಕರು, ಎಐಸಿಸಿ ಉಸ್ತುವಾರಿ ಕಾಯದರ್ಶಿಗಳು, ಜಿಲ್ಲಾ, ಬ್ಲಾಕ್ ಅಧ್ಯಕ್ಷರು, ಮಾಜಿ ಶಾಸಕರು, ಎಐಸಿಸಿ, ಕೆಪಿಸಿಸಿ ಪದಾಧಿಕಾರಿಗಳು, ಹಿರಿಯ ಮುಖಂಡರು, ಜಿಲ್ಲಾ ಮುಂಚೂಣಿ ಘಟಕ, ಸೆಲ್ ಅಧ್ಯಕ್ಷರು ಹಾಗೂ ಇತರರೊಂದಿಗೆ ಸಮಾಲೋಚನೆ ನಡೆಸಿ ತಕ್ಷಣ ಕೆಪಿಸಿಸಿಗೆ ವರದಿಯನ್ನು ಸಲ್ಲಿಸಬೇಕು ಎಂದು ಅಧ್ಯಕ್ಷರು ಸೂಚಿಸಿದ್ದಾರೆ.

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಮತ್ತೋರ್ವ ಮಾಜಿ ಸಚಿವ ವೆ.ಎಸ್.ಮೇಟಿ ನಿಧನದ ಬಳಿಕ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ತೆರವಾಗಿದ್ದವು. ಇದೀಗ ಶೀಘ್ರದಲ್ಲಿಯೇ ಚುನಾವಣೆ ನಡೆಸಲು ಚುನಾವಣಾ ಆಯೋಗ ಮುಂದಾಗಿರುವ ಹಿನ್ನೆಲೆ ಉಸ್ತುವಾರಿ ಸಮಿತಿ ನೇಮಕ ಮಾಡಲಾಗಿದೆ.

 

ದಾವಣಗೆರೆ ದಕ್ಷಿಣ ಸಮಿತಿಯ ಸಂಚಾಲಕರಾಗಿ ವಿಧಾನ ಪರಿಷತ್ತಿನ ಸದಸ್ಯ ಮಂಜುನಾಥ್ ಭಂಡಾರಿ ಅವರನ್ನು ನೇಮಿಸಲಾಗಿದ್ದು, ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಕೆ.ಎಚ್.ಮುನಿಯಪ್ಪ, ಬಿ.ಝೆಡ್.ಝಮೀರ್ ಅಹ್ಮದ್ ಖಾನ್, ಈಶ್ವರ್ ಖಂಡ್ರೆ, ಕೃಷ್ಣ ಭೈರೇಗೌಡ, ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ಸಂತೋಷ್‌ ಲಾಡ್, ಮಧುಬಂಗಾರಪ್ಪ, ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ತನ್ವೀರ್ ಸೇಠ್, ವಿ.ಆರ್.ಸುದರ್ಶನ್,ಎಚ್.ಎಂ.ರೇವಣ್ಣ, ಎಚ್.ಆಂಜನೇಯ ಸಮಿತಿಯಲ್ಲಿದ್ದಾರೆ.

ಬಾಗಲಕೋಟೆ ಉಪ ಚುನಾವಣೆ ಉಸ್ತುವಾರಿ ಸಮಿತಿಯ ಸಂಚಾಲಕರಾಗಿ ವಿಧಾನ ಪರಿಷತ್ತಿನ ಸದಸ್ಯ ವಸಂತ ಕುಮಾರ್ ಅವರನ್ನು ನೇಮಿಸಲಾಗಿದೆ. ಸಚಿವರಾದ ಆರ್.ಬಿ.ತಿಮ್ಮಾಪುರ, ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಶಿವರಾಜ್ ತಂಗಡಗಿ, ಶರಣಬಸಪ್ಪ ದರ್ಶನಾಪುರ, ಭೈರತಿ ಸುರೇಶ್, ರಹೀಂ ಖಾನ್, ಶಾಸಕರಾದ ವಿಜಯಾನಂದ ಕಾಶಪ್ಪನವರ್, ಸಿ.ಎಸ್.ನಾಡಗೌಡ, ಮಾಜಿ ಸಚಿವ ರಾಜಶೇಖರ್ ಪಾಟೀಲ್, ಪರಿಷತ್ತಿನ ಸದಸ್ಯರಾದ ಎಫ್.ಎಚ್.ಜಕ್ಕಪ್ಪನವರ್, ಬಸನಗೌಡ ಬಾದರ್ಲಿ, ಹಾಗೂ ಕಾಂಗ್ರೆಸ್ ಮುಖಂಡ ಸೋಮಣ್ಣ ಬೇವಿನಮರದ ಸಮಿತಿಯಲ್ಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News